ಮಂಗಳೂರು : ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನಲ್ಲಿ ನಡೆದಿದೆ.
ಜಗ್ಗು (35) ಹತ್ಯೆಯಾದ ಯುವಕ. ಹತ್ಯೆಗೈದ ಆರೋಪಿ ತೌಸಿಫ್ ಹುಸೈನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಬೆಳಿಗ್ಗೆ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಜಗ್ಗು ನನ್ನು ಕ್ಷುಲ್ಲಕ ಕಾರಣಕ್ಕೆ ಬೆಂಕಿಯಿಟ್ಟು ಸುಟ್ಟುಹಾಕಿದ್ದು, ಸ್ಥಳೀಯರು ತಕ್ಷಣ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಪ್ರಕರಣದಿಂದ ತಪ್ಪಿಸಿಕೊಳ್ಳಲು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೃತಪಟ್ಟಿದ್ದಾನೆ ಎಂದು ಸಾರ್ವಜನಿಕರಲ್ಲಿ ಹೇಳಿದ್ದಾನೆ.
ವಿಚಾರಣೆ ನಡೆಸಿದಾಗ ಆರೋಪಿ ತೌಸಿಪ್ ಕೊಲೆ ಮಾಡಿರುವುದಾಗಿ ಬಲವಾದ ಸಾಕ್ಷಿ ದೊರೆತ ಹಿನ್ನಲೆಯಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.