ಬೆಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸಿದ್ದ ಶಾಸಕ ರವಿ ಸುಬ್ರಹ್ಮಣ್ಯ, ಮಾಜಿ ಮೇಯರ್ ಗಳಾದ ಕಟ್ಟೆ ಸತ್ಯನಾರಾಯಣ, ಉಮೇಶ್ ಶೆಟ್ಟಿ, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ 11 ಮಂದಿ ಮೇಲೆ ಪ್ರಕರಣ ದಾಖಲಿದ್ದು, ಈ ಪೈಕಿ ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ.
ಯುವವಾಹಿನಿ, ಹಿಂದೂ ಸಂಘಟನೆ ಮತ್ತು ಬಿಜೆಪಿಯಲ್ಲಿ ಸಕ್ರಿಯವಾಗಿದ್ದ ಬೆಳ್ಳಾರೆ ಸಮೀಪದ ನೆಟ್ಟಾರು ನಿವಾಸಿ ಪ್ರವೀಣ್ ಅವರನ್ನು 2021ರ ಜುಲೈ 26ರಂದು ರಾತ್ರಿ ಬೆಳ್ಳಾರೆಯ ಅವರದೇ ಮಾಲಕತ್ವದ ಅಕ್ಷಯ ಚಿಕನ್ ಸೆಂಟರ್ ಮುಂಭಾಗದಲ್ಲಿ ಬರ್ಬರವಾಗಿ ಕಡಿದು ಕೊಲ್ಲಲಾಗಿತ್ತು. ಇದನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆದ ವೇಳೆ ಬೆಂಗಳೂರು ಟೌನ್‌ಹಾಲ್ ಮುಂಭಾಗದಲ್ಲಿಯೂ ಪ್ರತಿಭಟನೆ ನಡೆಸಲಾಗಿತ್ತು. ಬೆಂಗಳೂರು ನಗರದಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆ ಯಾವುದೇ ಸ್ಥಳಗಳಲ್ಲಿ ಪ್ರತಿಭಟನೆ ಮಾಡಬಾರದೆಂದು ಸರ್ಕಾರದ ಆದೇಶ ಇದ್ದರೂ ನಿಯಮ ಉಲ್ಲಂಘಿಸಿ ಮತ್ತು ಸರ್ಕಾರದಿಂದಾಗಲಿ ಅಥವಾ ಸಂಬಂಧಟ್ಟ ಪ್ರಾಧಿಕಾರದಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಟೌನ್‌ಹಾಲ್ ಮುಂದೆ ಪ್ರತಿಭಟನೆ ನಡೆಸಿ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡಿದ್ದಾರೆ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದ್ದಾರೆ ಎಂದು ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ಖಾಸಗಿ ದೂರು ದಾಖಲಿಸಿದ್ದರು.
ಪ್ರತಿಭಟನೆ ನಡೆಸಿದ್ದ ಶಾಸಕ ರವಿಸುಬ್ರಹ್ಮಣ್ಯ, ಮಾಜಿ ಮೇಯರ್‌ಗಳಾದ ಕಟ್ಟೆ ಸತ್ಯನಾರಾಯಣ, ಉಮೇಶ್ ಶೆಟ್ಟಿ ಮತ್ತು ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಒಟ್ಟು 11 ಜನರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿತ್ತು. ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ 2022ರ ಜುಲೈ 28ರಂದು ಜೆ.ಸಿ. ರಸ್ತೆಯಲ್ಲಿ ನಡೆಸಿದ್ದ ಶಾಸಕ ರವಿಸುಬ್ರಹ್ಮಣ್ಯ, ಮಾಜಿ ಮೇಯರ್‌ಗಳಾದ ಕಟ್ಟೆ ಸತ್ಯನಾರಾಯಣ, ಉಮೇಶ್ ಶೆಟ್ಟಿ ಮತ್ತು ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಒಟ್ಟು 11 ಜನರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿತ್ತು.
ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ 2022ರ ಜುಲೈ 28ರಂದು ಜೆ.ಸಿ. ರಸ್ತೆಯ ಟೌನ್‌ಹಾಲ್ ಮುಂಭಾಗ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6.30ರವರೆಗೆ ಹಿಂದೂ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ, ಜಿಹಾದಿಗಳಿಗೆ ಧಿಕ್ಕಾರ, ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು. ಪ್ರವೀಣ್ ನೆಟ್ಟಾರ್ ಹಂತಕರನ್ನು ಸಾರ್ವಜನಿಕವಾಗಿ ಎನ್‌ಕೌಂಟರ್ ಮಾಡಬೇಕು ಎಂದು ಘೋಷಣೆ ಕೂಗಲಾಗಿದೆ ಎಂದು ಕೇಸ್‌ನಲ್ಲಿ ಉಲ್ಲೇಖಿಸಲಾಗಿತ್ತು.