ಪುತ್ತೂರು : ಆರ್ಯಾಪು ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜಗದೀಶ್ ಭಂಡಾರಿ ಹಾಗೂ ವಸಂತ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಬುಧವಾರ ನಾಮಪತ್ರ ಸಲ್ಲಿಸಿದರು.
ಆರ್ಯಾಪು ಗ್ರಾಮ ಪಂಚಾಯತಿಯ ಆರ್ಯಾಪು ಎರಡನೇ ವಾರ್ಡ್ನ (ಆರ್ಯಾಪು 11) ಸದಸ್ಯರಾಗಿದ್ದ ನಿವೃತ್ತ ಎಸ್ಐ ರುಕ್ಕಯ್ಯ ಮೂಲ್ಯ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದು, ಈ ಹಿನ್ನೆಲೆ ಉಪಚುನಾವಣೆ ನಡೆಯಲಿದೆ.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಬೂಡಿಯಾರ್ ರಾಧಾಕೃಷ್ಣ ರೈ, ಜೀವಂಧರ್ ಜೈನ್, ಚನಿಲ ತಿಮ್ಮಪ್ಪ ಶೆಟ್ಟಿ, ಜಗನ್ನಿವಾಸ ರಾವ್, ಆರ್.ಸಿ.ನಾರಾಯಣ, ಗೋಪಾಲಕೃಷ್ಣ ಹೇರಳೆ, ಆಶಾ ತಿಮ್ಮಪ್ಪ, ಜಯಶ್ರೀ ಶೆಟ್ಟಿ, ಅರುಣ್ ವಿಟ್ಲ, ಯುವರಾಜ್ ಪೆರಿಯತ್ತೋಡಿ ಮತ್ತಿತರರು ಉಪಸ್ಥಿತರಿದ್ದರು.