ಮಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಇಂಡಿಯನ್ ಕಾನ್ಸರೆನ್ಸ್ ಆಫ್ ಇಂಟಲೆಕ್ಚುವಲ್ಸ್ ನೀಡುವ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಇಂದು ದಿಲ್ಲಿಯ ಇಂಡಿಯಾ ಇಂಟರ್ ನ್ಯಾಶನಲ್ ಸೆಂಟರ್ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಒಡಿಶಾ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿ ವಿ.ಗೋಪಾಲ ಗೌಡ ಮತ್ತು ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದ ರಾಷ್ಟ್ರೀಯ ಅಧ್ಯಕ್ಷರು ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸುಪ್ರೀ ಕೋರ್ಟಿನ ನ್ಯಾಯಾಧೀಶ ಪ್ರಶಾಂತ್ ಕುಮಾರ್ ಮಿಶ್ರ ಭಾಗವಹಿಸಲಿದ್ದಾರೆ.