ಪುತ್ತೂರು: ದೇವಾಲಯಗಳಿಗೆ ತೆರಳಿ ಪೋಟೋ ಕ್ಲಿಕ್ಕಿಸಲೆಂದೇ ತೆರಳುವವರಿಗೆ ರಾಜ್ಯ ಸರ್ಕಾರ ಶಾಕಿಂಗ್ ನ್ಯೂಸ್ ನೀಡಿದೆ. ಕರ್ನಾಟಕದ ದೇಗುಲಗಳಲ್ಲಿ ಮೊಬೈಲ್ ಬಳಕೆಗೆ ನಿಷೇಧ ಹೇರಿ ನೂತನ ಆದೇಶ ಹೊರಡಿಸಿದೆ.
ಇಂದು ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಈ ಆದೇಶವನ್ನು ಹೊರಡಿಸಿದ್ದು ದತ್ತಿ ಇಲಾಖೆಗಳ ಅಡಿಯಲ್ಲಿ ಬರುವ ಯಾವುದೇ ದೇಗುಲಗಳಲ್ಲಿ ಇನ್ಮೇಲೆ ಮೊಬೈಲ್ ಬಳಕೆ ಮಾಡುವಂತಿಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿದೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರ 30 ಸಾವಿರಕ್ಕೂ ಅಧಿಕ ದೇವಾಲಯಗಳು ಇರುತ್ತದೆ. ಈಗಾಗಲೇ ದತ್ತಿ ಇಲಾಖೆಗಳ ವ್ಯಾಪ್ತಿಯಲ್ಲಿ ಬರುವ ದೇಗುಲಗಳಿಗೆ ಮೊಬೈಲ್ ಬಳಕೆ ಮಾಡದಂತೆ ಫಲಕಗಳನ್ನು ಅಳವಡಿಸಲಾಗಿದೆಯಾದರೂ ಸಹ ಅದನ್ನು ಯಾರೂ ಪಾಲಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಈ ಆದೇಶ ಹೊರಬಿದ್ದಿದೆ.