ಪುತ್ತೂರು: ಸೌಜನ್ಯರವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕುರಿತಾಗಿ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಮತ್ತಿತರರಿಗೆ ಆದೇಶ ನೀಡಿದೆ.
ಉಜಿರೆಯ ಎಸ್‌ಡಿಎಂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಸೌಜನ್ಯರವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ನಡೆದು ಇತ್ತೀಚೆಗೆ ಆರೋಪಿ ಕಾರ್ಕಳದ ಸಂತೋಷ್ ರಾವ್ ನಿರಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕುರಿತಾಗಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತಿತರರು ನಿರಂತರ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಯವರ ಕುರಿತು ಮಾನಹಾನಿಕರ ಹೇಳಿಕೆ ನೀಡದಂತೆ ಆದೇಶ ನೀಡಿದ್ದಾರೆ. ಅರ್ಜಿದಾರರ ಪರ ಖ್ಯಾತ ವಕೀಲರಾದ ಪುತ್ತೂರು ಮೂಲದ ರಾಜಶೇಖರ ಇಲಿಯಾ ವಾದಿ