ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆಯನ್ನು ನಡೆಸಿದರು.
ಸಭೆಯಲ್ಲಿ ಇತ್ತೀಚೆಗಿನ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಉಂಟಾಗಿರುವ ಪಾಟ್ ಹೋಲ್ ಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಸ್ಥಳಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಶೀಘ್ರದಲ್ಲಿ ನಡೆಸುವುದಾಗಿ ಸಂಸದರು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ತಿಳಿಸಿದರು.
ಈ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಇಂಜಿನಿಯರ್ ಗಳು, ಕಾಮಗಾರಿಗಳ ಗುತ್ತಿಗೆದಾರರು ಮತ್ತಿತರರು ಉಪಸ್ಥಿತರಿದ್ದರು.