ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಮತ್ತು ಮಲೆನಾಡಿನಲ್ಲಿ ನಿರಂತರ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದೆ. ಘಟ್ಟ ಪ್ರದೇಶದಲ್ಲಿ ಕೂಡಾ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ
ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಈ ಭಾಗದಲ್ಲಿ ಶನಿವಾರದಿಂದ ನಿರಂತರ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದ್ದು, ನದಿ ಸಮೀಪ ಹೋಗದಂತೆ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದೆ.
ಪೊಲೀಸರು, ಗೃಹರಕ್ಷಕ ದಳದಿಂದ ಸ್ನಾನ ಘಟ್ಟ ಬಳಿ ಕಾವಲು ಕಾಯುತ್ತಿದ್ದಾರೆ. ಹಾಕಲಾಗಿದೆ. ಸ್ನಾನಘಟ್ಟ ಮತ್ತು ಪಕ್ಕದ ರಸ್ತೆಗಳು ನೀರಿನಿಂದ ಆವೃತವಾಗಿ ನದಿಯಂತೆ ಕಾಣುತ್ತಿದೆ.
ಕುಕ್ಕೆ ಕ್ಷೇತ್ರ ಸಂಪರ್ಕಿಸುವ ಶಿರಾಡಿ ಘಾಟಿ ಹೆದ್ದಾರಿ ಮತ್ತು ಪುತ್ತೂರು, ಮಂಗಳೂರು ಕಡೆಯಿಂದ ಸಂಪರ್ಕಿಸುವ ಸುಬ್ರಹ್ಮಣ್ಯ – ಮಂಜೇಶ್ವರ ಹೆದ್ದಾರಿ ಕೂಡಾ ಜಲಾವ್ರತಗೊಂಡಿದೆ.
ಶನಿವಾರ ಮತ್ತು ಭಾನುವಾರವಾದಂದು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ಮಳೆಯಿಂದಾಗಿ ಸಮಸ್ಯೆಗೆ ಎದುರಿಸುವಂತಾಗಿದೆ.