ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ಮತ್ತು ಎಂಸಿಎ ವಿಭಾಗ ಹಾಗೂ ವೆಸ್ಟರ್ನ್ ಆಸ್ಟ್ರೇಲಿಯಾ ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-೨೦೨೩ ಜು.26 ಬುಧವಾರ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆಯಲಿದೆ.
ಪ್ರಪಂಚದಾದ್ಯಂತ ಶಿಕ್ಷಣ ತಜ್ಞರು, ಸಂಶೋಧಕರು ವಿದ್ಯಾರ್ಥಿಗಳು ಮತ್ತು ಉದ್ಯಮ ಕ್ಷೇತ್ರದ ತಜ್ಞರನ್ನು ಒಟ್ಟುಗೂಡಿಸಿ, ನಿರ್ವಹಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಬಗ್ಗೆ ಬೆಳಕುಚೆಲ್ಲುವ, ಚರ್ಚೆ ಹಾಗೂ ವಿಚಾರ ವಿನಿಮಯವನ್ನು ನಡೆಸುವ ಉದ್ದೇಶದಿಂದ ಇದನ್ನು ಸಂಘಟಿಸಲಾಗಿದೆ.
ಬೆಳಿಗ್ಗೆ 9.30 ಎನ್‌ಐಟಿಕೆ ಸುರತ್ಕಲ್‌ನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಐಇಇಇ ಮಂಗಳೂರು ಉಪ ವಿಭಾಗದ ಅಧ್ಯಕ್ಷ ಡಾ.ಮೋಹಿತ್.ಪಿ.ತಹಿಲಿಯಾನಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸುಲ್ತಾನೇಟ್ ಆಫ್ ಒಮನ್ ಮಸ್ಕತ್ತಿನ ಬ್ಯಾಂಕಿಂಗ್ ಮತ್ತು ಹಣಕಾಸು ಅಧ್ಯಯನ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕ ಡಾ.ಆನಂದ್ ಸೂರ್ಯನಾರಾಯಣ ಹಾಗೂ ಯುನಿವರ್ಸಿಟಿ ಆಫ್ ವೆಸ್ಟರ್ನ ಆಸ್ಟ್ರೇಲಿಯಾದ ಪ್ರಾದೇಶಿಕ ವ್ಯವಸ್ಥಾಪಕಿ ಶಶಿರೇಖಾ ಗೌರವ ಅತಿಥಿಗಳಾಗಿ ಪಾಲ್ಗೊಳ್ಳುತ್ತಾರೆ. ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಅಧ್ಯಕ್ಷತೆ ವಹಿಸುವರು.
ಸಂಜೆ 4.15 ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣುಗಣಪತಿ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ಸತ್ಯನಾರಾಯಣ ಭಟ್.ಬಿ ಅಧ್ಯಕ್ಷತೆ ವಹಿಸುತ್ತಾರೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.