ಪುತ್ತೂರು: ಯುವಕನೋರ್ವ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ಸಂಪ್ಯ ಪೊಲೀಸರು ವಿಚಾರಿಸಿದಾಗ ಯುವಕ ಗಾಂಜಾ ಸೇವನೆ ಮಾಡಿ ಈ ರೀತಿ ವರ್ತಿಸಿದ್ದಾನೆ ಎಂದು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇರ್ದೆ ಗ್ರಾಮ ತನ್ನೀರ್ ಮಂಜಿಲ್ ನಿವಾಸಿ ಮೊಹಮ್ಮದ್ ತಪ್ಪಿರ್ (21)ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗ್ರಾಮಾಂತರ ಠಾಣಾ ಎಸ್.ಐ ಧನಂಜಯ ಬಿ.ಸಿ ಅವರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಇರ್ದೆ ಗ್ರಾಮದ ದೂಮಡ್ಕ ಗೋಳಿಪದವು ಸಮೀಪ ಯುವಕನೋರ್ವ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದು ಕಂಡು ಬಂದಂತೆ ಆತನನ್ನು ವಿಚಾರಿಸಿದಾಗ ಆತ ಸಮರ್ಪಕ ಉತ್ತರ ನೀಡದ ಹಿನ್ನಲೆಯಲ್ಲಿ ಯಾವುದೋ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಅತನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆತ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.