ಪುತ್ತೂರು: ರಾಷ್ಟ್ರಕವಿ ಕುವೆಂಪು ಅವರ ಹುಟ್ಟುಹಬ್ಬದ ದಿನವನ್ನು ವಿಶ್ವ ಮಾನವ ದಿನವನ್ನಾಗಿ ಆಚರಿಸುತ್ತಿದ್ದು, ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿಯಿಂದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ನಮ್ಮ ದೇಶ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದನ್ನು ತಿಳಿಸಿದವರು ಕುವೆಂಪು. ಈ ಮೂಲಕ ವಿಶ್ವ ಮಾನವ ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಮಾತನಾಡಿ, ಕುವೆಂಪು ಅವರು ಮೊದಲಿಗೆ ಇಂಗ್ಲೀಷಿನಲ್ಲಿ ಸಾಹಿತ್ಯ ರಚಿಸಿದರು. ನಂತರ ಕನ್ನಡದಲ್ಲಿ ಸಾಹಿತ್ಯ ರಚಿಸುತ್ತಾ, ಕ್ರಾಂತಿ ನಿರ್ಮಿಸಿದ್ದು ಮಾತ್ರವಲ್ಲ, ಕನ್ನಡದ ಅಗ್ರಗಣ್ಯ ಸಾಹಿತಿಯಾಗಿ ಮೂಡಿಬಂದರು ಎಂದರು.
ತಹಶೀಲ್ದಾರ್ ನಿಸರ್ಗ ಪ್ರಿಯ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ತಹಸೀಲ್ದಾರ್ ಗ್ರೇಡ್ ೨ ಲೋಕೇಶ್ ಉಪಸ್ಥಿತರಿದ್ದರು.ತಾಲೂಕು ಕಚೇರಿಯ ದಯಾನಂದ್ ಸ್ವಾಗತಿಸಿ, ಉಪತಹಶೀಲ್ದಾರ್ ಸುಲೋಚನಾ ಕಾರ್ಯಕ್ರಮ ನಿರೂಪಿಸಿದರು.