ಬೈಲಹೊಂಗಲ : ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿಷಾಹಾರ ಸೇವಿಸಿ 38 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಅಸ್ವಸ್ಥ ವಿದ್ಯಾರ್ಥಿಗಳಿಗೆ ಸಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡು ಮತ್ತೆ ಶಾಲೆಗೆ ತೆರಳಿದ್ದಾರೆ.
ಗುರುವಾರ ರಾತ್ರಿ ಮಕ್ಕಳಿಗೆ ಚಿಕನ್, ಪನೀರ್ ನೀಡಲಾಗಿತ್ತು. ಊಟದ ಬಳಿಕ ಮಕ್ಕಳು ಅಸ್ವಸ್ಥರಾಗಿದ್ದರು. ವಿಷಯ ತಿಳಿದ ಉಪವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪೂರ, ಪ್ರಭಾರಿ ತಹಶೀಲ್ದಾರ್ ಜೆ.ಸಿ.ಅಷ್ಟಗಿಮಠ, ಡಿವೈಎಸ್ ರವಿ ನಾಯ್ಕ, ಸಿಪಿಐ ಪಂಚಾಕ್ಷರಿ ಸಾಲಿಮಠ, ಕಂದಾಯ ನಿರೀಕ್ಷಕ ಸುರೇಶ ಮಾಳಗಿ ಶಾಲೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ, ಊಟದ ವ್ಯವಸ್ಥಾಪಕ ಮತ್ತು ಪ್ರಾಚಾರ್ಯರನ್ನು ತರಾಟೆಗೆತ್ತಿಕೊಂಡರು.