ಪುತ್ತೂರು: ಬನ್ನೂರು ಕೃಷ್ಣನಗರ ಸಮೀಪದಲ್ಲಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ ಮತ್ತು ಕೃತಜ್ಞತಾ ಸಭೆ ಶನಿವಾರ ನಡೆಯಿತು.
ಮುಖ್ಯ ಅತಿಥಿಯಾಗಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಮಾತನಾಡಿ, ಶೈಕ್ಷಣಿಕ ಚಿಂತನೆಯ ಕುರಿತು ಶಾಲೆಯ ಪೋಷಕರಿಗೆ ಹಾಗೂ ಶಿಕ್ಷಕರಿಗೆ ಸಲಹೆ ಸೂಚನೆಯನ್ನು ನೀಡಿದರು.
ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಗುಡ್ಡಪ್ಪ ಗೌಡ ಬಲ್ಯ ಕೃತಜ್ಞತಾ ಮಾತಗಳನ್ನಾಡಿ, ಎವಿಜಿ ವಿದ್ಯಾಸಂಸ್ಥೆಯು ಆರಂಭವಾಗಲು ಶ್ರಮಿಸಿದ ಎಲ್ಲರಿಗೂ ಹಾಗೂ ಶಾಲೆಗೆ ವಿದ್ಯಾರ್ಥಿಗಳನ್ನು ಕಳುಹಿಸಿಕೊಟ್ಟ ಪೋಷಕ ವೃಂದದವರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು. ಪುತ್ತೂರಿನಂತಹ ಪ್ರದೇಶದಲ್ಲಿ ಹೊಸ ಶಿಕ್ಷಣ ಸಂಸ್ಥೆಯನ್ನು ಆರಂಭಿಸುವುದು ಎವಿಜಿ ಸಂಸ್ಥೆಯ ಕನಸು ಆಗಿತ್ತು, ಆ ಕನಸನ್ನು ನನಸಾಗಿಸಲು ಸಂಸ್ಥೆಯ ಸಂಚಾಲಕ ಎ.ವಿ. ನಾರಾಯಣ, ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಹಾಗೂ ಇತರ ಆಡಳಿತ ಮಂಡಳಿಯ ಸದಸ್ಯರು ತಮ್ಮ ತನು ಮನ ಧನಗಳ ಮೂಲಕ ಶ್ರಮಿಸಿರುತ್ತಾರೆ, ಇದು ಮುಂದೆ ಒಂದು ಉತ್ತಮ ವಿದ್ಯಾಸಂಸ್ಥೆಯಾಗಲು ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ಸಂಸ್ಥೆಯ ಅಧ್ಯಕ್ಷ ವೆಂಕಟರಮಣಗೌಡ ಕಳುವಾಜೆ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಸಂಚಾಲಕ ಎ.ವಿ. ನಾರಾಯಣ ಅತಿಥಿಯರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಎವಿಜಿ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ಉಪಕಾರ್ಯದರ್ಶಿ ಕೆ.ವಿ. ಪ್ರತಿಭಾ ದೇವಿ, ಉಪಾಧ್ಯಕ್ಷೆ ಕೆ.ವಿ. ಪುಷ್ಪವತಿ ಗೌಡ ಕಳುವಾಜೆ, ಕಾನೂನು ಸಲಹೆಗಾರ್ತಿ ಟಿ ಜಿ ದೀಕ್ಷಾ, ಹಾಗೂ ಸಂಸ್ಥೆಯ ಖಜಾಂಚಿ ವನಿತಾ ಎ.ವಿ., ನಿರ್ದೇಶಕರಾದ ಗಂಗಾಧರ ಗೌಡ ಎ.ವಿ., ಗೌರಿ ಬನ್ನೂರು, ಸೀತಾರಾಮ ಪೂಜಾರಿ ಮೇಲ್ಮಜಲು, ಸಂಸ್ಥೆಯ ಸಹಾಯಕರಾದ ನಾರಾಯಣ ಕುಲಾಲ್ ಮತ್ತು ಭುವನೇಶ್ವರಿ, ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ಶಾಲೆಯ ಪುಟಾಣಿಯರಾದ ಅನಿಕ, ವಿನೀಶ್, ಗಯನ್, ತನಿಷ್ಕ ಮತ್ತು ಆನ್ವಿ ಇವರು ಪ್ರಾರ್ಥನೆ ಹಾಡಿದರು. ಶಿಕ್ಷಕಿ ಯಶುಭ ರೈ ಸಂವಿಧಾನದ ಪೂರ್ವ ಪೀಠಿಕೆಯನ್ನು ವಾಚಿಸಿದರು. ಕಛೇರಿ ಸಿಬ್ಬಂದಿ ವನಿತಾ ಸ್ವಾಗತಿಸಿದರು, ಉಪಾಧ್ಯಕ್ಷ ಉಮೇಶ್ ಮಳುವೇಲು ವಂದಿಸಿದರು. ಪ್ರಾಂಶುಪಾಲೆ ಉಷಾಕಿರಣ ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು.