ಸುಳ್ಯ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ರಹಸ್ಯವಾಗಿ ಹಿಂದೂ ವಿಧ್ಯಾರ್ಥಿನಿಯರ ಅರೆನಗ್ನ ವಿಡಿಯೋ ಚಿತ್ರೀಕರಿಸಿ ಮಾನಹಾನಿ ಮಾಡಿರುವ ಮತ್ತು ಈ ಘಟನೆಯ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲು ಹಿಂಜರಿಯುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ಮಂಗಳೂರು ಪುರಭವನದಲ್ಲಿ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿದರು.
ವೇದಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಂಗಳೂರು ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಉತ್ತರ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯ್ಕ, ರಾಜೇಶ್ ಕಾವೇರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುದರ್ಶನ್ ಎಂ, ಮಾಜಿ ಶಾಸಕ ಸಂಜೀವ ಮಠಂದೂರು, ಒಬಿಸಿ ಮೋರ್ಚಾದ ಆರ್.ಸಿ.ನಾರಾಯಣ ರೆಂಜ. ಮತ್ತಿತರ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.