ಪುತ್ತೂರು: ಕೆಲಿಂಜ ಕೇಸರಿ ಫ್ರೆಂಡ್ಸ್, ಬಂಟ್ವಾಳ ತಾಲೂಕು ಅಮೆಚೂರು ಅಸೊಸಿಯೇಶನ್ ಆಶ್ರಯದಲ್ಲಿ 65 ಕೆ.ಜಿ. ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಜ. 1ರಂದು ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯಲಿದೆ.
ಬಿಪಿನ್ ರಾವತ್ ವೇದಿಕೆಯಲ್ಲಿ ಬೆಳಿಗ್ಗೆ 9.30ಕ್ಕೆ ಆರಂಭವಾಗುವ ಕಾರ್ಯಕ್ರಮವನ್ನು ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಶಂಕರನಾರಾಯಣ ಭಟ್ ಪುಂಡಿಕೈ ಉದ್ಘಾಟಿಸಲಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ವೀರಕಂಭ ಗ್ರಾ.ಪಂ. ಅಧ್ಯಕ್ಷ ದಿನೇಶ್ ಪೂಜಾರಿ ವೀರಕಂಭ, ನೇರಳಕಟ್ಟೆ ಸಹಕಾರಿ ವ್ಯವಸಾಯಿಕ ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ್ ಚೌಟ ಮಾಣಿ, ವಿಟ್ಲ ಪಡ್ನೂರು ವ್ಯ. ಸಹಕಾರಿ ಬ್ಯಾಂಕ್ ನಿರ್ದೇಶಕ ಅಭಿಷೇಕ್ ರೈ ಕುಳಾಲುಬೀಡು, ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ಪದ್ಮನಾಭ ಗೌಡ ಅಡ್ಯೆಯಿ, ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾಗೇಶ್ ಶೆಟ್ಟಿ ಕೊಡಂಗಾಯಿ, ಯಕ್ಷಗಾನ ಕಲಾವಿದ ಕುಸಲ್ದ ಗುರಿಕಾರೆ ದಿನೇಶ್ ಶೆಟ್ಟಿಗಾರ್ ಕೋಡಪದವು ಮೊದಲಾದವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಪಂದ್ಯಾಟದ ಪ್ರಥಮ ಬಹುಮಾನವಾಗಿ 7023 ರೂ. ಹಾಗೂ ಯುವರತ್ನ ಟ್ರೋಫಿ, ದ್ವಿತೀಯ ಬಹುಮಾನವಾಗಿ 5023 ರೂ. ಹಾಗೂ ಯುವರತ್ನ ಟ್ರೋಫಿ, ತೃತೀಯ ಬಹುಮಾನವಾಗಿ 3023 ರೂ. ಹಾಗೂ ಯುವರತ್ನ ಟ್ರೋಫಿ, ಚತುರ್ಥ ಬಹುಮಾನವಾಗಿ 3023 ರೂ.ಹಾಗೂ ಯುವರತ್ನ ಟ್ರೋಫಿ ನೀಡಿ ಗೌರವಿಸಲಾಗುವುದು. ಅಲ್ಲದೇ, ಉತ್ತಮ ದಾಳಿಗಾರ, ಸರ್ವಾಂಗೀಣ ಆಟಗಾರ, ಉತ್ತಮ ಹಿಡಿತಗಾರ ಪ್ರಶಸ್ತಿಗಳನ್ನು ನೀಡಲಾಗುವುದು. ತಂಡದ ಪ್ರವೇಶ ಶುಲ್ಕ 500 ರೂ. ನಿಗದಿ ಪಡಿಸಲಾಗಿದೆ. ಪಂದ್ಯಾಟ ಸರಿಯಾಗಿ ಬೆಳಿಗ್ಗೆ 9.30ಕ್ಕೆ ಆರಂಭವಾಗಲಿದ್ದು, ಭಾಗವಹಿಸುವ ಕ್ರೀಡಾಪಟುಗಳಿಗೆ ಮ್ಯಾಟ್ ಶೂ ಕಡ್ಡಾಯವಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.