ಸೌಜನ್ಯ ಕೊಲೆ ಪ್ರಕರಣ | ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಂಡುವಂತೆ ಡಾ.ಹೆಗ್ಗಡೆಯವರಿಂದ ಮನವಿ

ಬೆಳ್ತಂಗಡಿ : ಹನ್ನೊಂದು ವರ್ಷಗಳ ಹಿಂದೆ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧಿಸಿ ಸರಕಾರ ಮತ್ತು ತನಿಖಾ ಸಂಸ್ಥೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕು ಎಂದು  ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸರಕಾರವನ್ನು ಒತ್ತಾಯಿಸಿದ್ದಾರೆ.

ಪ್ರಸ್ತುತ ಸೌಜನ್ಯ ಸಾವು ಪ್ರಕರಣ ನ್ಯಾಯಾಲಯ, ಸರಕಾರ ಹಾಗೂ ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸುತ್ತೇನೆ ಹಾಗೂ ಈ ವಿಚಾರವಾಗಿ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೆ ಈಡಾಗಬಾರದು ಎಂದು ವಿನಂತಿಸುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಡಾ.ಹೆಗ್ಗಡೆ  ತಿಳಿಸಿದ್ದಾರೆ.

ಸೌಜನ್ಯ ಅತ್ಯಾಚಾರ ಮತ್ತು ಸಾವಿನ ಹಿಂದೆ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಕೈವಾಡವಿದೆ ಎಂಬ ಆರೋಪ ಕೇಳ ಬರುತ್ತಿರುವ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದೆ ಡಾ.ವೀರೇಂದ್ರ ಹೆಗ್ಗಡೆ ಅವರು ನನ್ನ ವಿರುದ್ಧ ಯಾವುದೇ ಮಾಧ್ಮಮಗಳಿಂದ ಅವಹೇಳನಕಾರಿ ವರದಿ ಮಾಡದಂತೆ ಮತ್ತು ಸಾಮಾಜಿಕ ಮಾಧ್ಯಮಗಳು ಸೇರಿದಂತೆ ಇನ್ನಿತರ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪ್ರಧಾನ ಮತ್ತು ನ್ಯಾಯಾಲಯ ಆದೇಶಿಸಿತ್ತು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top