ವಿದ್ಯಾರ್ಥಿನಿಯನ್ನು ಆಟೋದಲ್ಲಿ ಡ್ರಾಪ್ ಮಾಡಿದ್ದಕ್ಕೆ ತಂಡದಿಂದ ಹಲ್ಲೆ

ಬೆಳ್ತಂಗಡಿ : ವಿದ್ಯಾರ್ಥಿನಿಯೋರ್ವಳನ್ನು ಅನ್ಯ ಕೋಮಿನ ಯುವಕನೊಬ್ಬ ಆಟೋ ರಿಕ್ಷಾದಲ್ಲಿ ಡ್ರಾಪ್ ಮಾಡದ್ದಕ್ಕೆ ತಂಡವೊಂದು ಆತನಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

ಬೆಂಗಳೂರಿನ ನಿವಾಸಿ ಹಿಂದೂ ವಿದ್ಯಾರ್ಥಿನಿಯೊಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜ್ ಕೊನೆಗೊಂಡಿದ್ದು. ಬುಧವಾರ ರಾತ್ರಿ ಬೆಂಗಳೂರಿಗೆ ತೆರಳಲು ಪರಿಚಯಸ್ಥ ಮುಸ್ಲಿಂ ಆಟೋ ಚಾಲಕ ಆಟೋ ಮೊಹಮ್ಮದ್ ಆಶೀಕ್ ಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆ.2 ರಂದು ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಕೊಡಲು ಹೇಳಿದ್ದಾಳೆ. ವಿದ್ಯಾರ್ಥಿನಿಯನ್ನು ಬಸ್ ನಿಲ್ದಾಣಕ್ಕೆ ಬಿಟ್ಟು ವಾಪಾಸಾಗುತ್ತಿದ್ದ ವೇಳೆ ಯುವಕರ ತಂಡ ಆತನಿಗೆ ಹಲ್ಲೆ ನಡೆಸಿದೆ.

ಬುಧವಾರ ರಾತ್ರಿ ಸುಮಾರು ಗಂಟೆಗೆ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದ ಮುಂದೆ ಹಲ್ಲೆ ಮಾಡಿದ್ದು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ತಂಡದಿಂದ ಧರ್ಮಸ್ಥಳ ಸುತ್ತಮುತ್ತಲಿನ ಸಿಸಿಕ್ಯಾಮರದ ಸಹಾಯದಿಂದ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top