ಬೆಳ್ಳಾರೆ : ಸುಳ್ಯ ತಾಲೂಕಿನ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟ ನಡೆಯಿತು.
ದ.ಕ.ಜಿಲ್ಲಾ ಪಂಚಾಯಿತಿ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾಪಂ ಅಧ್ಯಕ್ಷ ಚಂದ್ರಶೇಖರ ಪನ್ನೆ, ಶಿಕ್ಷಣ ಇಲಾಖೆ ಅಧಿಕಾರಿ ಶ್ರೀನಾಥ್ ರೈ ಬಾಳಿಲ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.