ಸಿ ಎ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಪುತ್ತೂರು: ಭಾರತೀಯ ಚಾರ್ಟಡ್ ಅಕೌಂಟೆಂಟ್ಸ್ ಸಂಸ್ಥೆ ಕಳೆದ ಜೂನ್ ನಲ್ಲಿ ನಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ತೇರ್ಗಡೆಯಾಗುವುದರ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳಾದ ಸುದೇಶ್ ಭಟ್-245 ಅಂಕ, ಆದಿತ್ಯ ನಾರಾಯಣ ಪಿ ಎಸ್-239 ಅಂಕ, ಪ್ರದೀಪ್ ಕೃಷ್ಣ ಐ-202 ಅಂಕ  ಮತ್ತು ಎಸ್ ತ್ವಿಷ-200 ಅಂಕಗಳನ್ನು ಪಡೆದು ತೇರ್ಗಡೆಯಾಗುವುದರ ಮೂಲಕ ಮುಂದಿನ ಹಂತದ ಸಿ ಎ ಇಂಟರ್‌ಮಿಡಿಯೆಟ್ ಪರೀಕ್ಷೆಯನ್ನು ಬರೆಯಲು ಅರ್ಹತೆ ಗಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top