ಪುತ್ತೂರು: ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಿಪ್ಪಾಡಿ ಬೇರಿಕೆಯ ಕಾಯರ್ ಕಾಡ್ ನಲ್ಲಿ ನಡೆದಿದೆ.
ಪುತ್ತೂರಿನ ಶರ್ಮಹಾನ್ ಸೊಸೈಟಿಯ ಅಧ್ಯಕ್ಷರಾಗಿದ್ದ ಗಿರೀಶ್ ಶರ್ಮ ಅವರ ತಂದೆ ಗಣೇಶ್ ಶರ್ಮ(60ವ)ರವರು ಮನೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.
ಅವರು ತನ್ನ ಮನೆಯ ಹಿಂಬದಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತರು ಪತ್ನಿ, ಪುತ್ರ, ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.