ಪುತ್ತೂರು: ಬಸ್ ನಿಲ್ದಾಣದ ಬಳಿಯಿರುವ ಗಾಂಧೀ ಕಟ್ಟೆಯಲ್ಲಿ 77 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಶಾಸಕ ಅಶೋಕ್ ಕುಮಾರ್ ರೈ ಧ್ವಜಾರೋಹಣ ನೆರವೇರಿಸಿ, ಮಹಾತ್ಮ ಗಾಂಧೀಜಿಯವರ ಪ್ರತಿಮೆ ಹಾರಾರ್ಪಣೆ ಮಾಡುವ ಮೂಲಕ ನೆರವೇರಿಸಿ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶಿಲ್ದಾರ್ ಜೆ.ಶಿವಶಂಕರ್, ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್, ಗಾಂಧೀಕಟ್ಟೆ ಸಮಿತಿಯ ಸಯ್ಯದ್ ಕಮಲ್, ಸೀತಾರಾಮ ಶೆಟ್ಟಿ ಬನ್ನೂರು, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಉಲ್ಲಾಸ್ ಪೈ, ಲ್ಯಾನ್ಸಿ ಮಸ್ಕರೇನಸ್, ಸೀತಾ ಭಟ್, ಅಸ್ಮಾ ಗಟ್ಟಮನೆ, ದಾಮೋದರ ಭಂಡಾರ್ ಕರ್ ಸಹಿತ ಹಲವು ಮಂದಿ ಉಪಸ್ಥಿತರಿದ್ದರು.
ಗಾಂಧೀಕಟ್ಟೆ ಸಮಿತಿ ಸಂಚಾಲಕ ಕೃಷ್ಣಪ್ರಸಾದ್ ಆಳ್ವ ಸ್ವಾಗತಿಸಿದರು. ನ್ಯಾಯವಾದಿ ಸಾಹಿರಾ ಝುಬೈರ್ ವಂದಿಸಿದರು.