ಉಪನೋಂದಣಾಧಿಕಾರಿ ಕಚೇರಿ ವ್ಯಾಪ್ತಿಯ ಸ್ಥಿರಾಸ್ತಿ ಮಾರ್ಗಸೂಚಿ ಬೆಲೆ ಪರಿಷ್ಕರಣೆ

ಪುತ್ತೂರು: ಪುತ್ತೂರು ಉಪನೋಂದಣಾ ಕಚೇರಿ ವ್ಯಾಪ್ತಿಯ ಸ್ಥಿರಾಸ್ತಿ ಮಾರುಕಟ್ಟೆ ಮಾರ್ಗಸೂಚಿ ಬೆಲೆ ಪರಿಷ್ಕರಣೆ ಮಾಡಲಾಗಿದೆ.

2023-24ನೇ ಸಾಲಿಗೆ ಸಂಬಂಧಿಸಿ ಮಾರುಕಟ್ಟೆ ಮೌಲ್ಯ ಮಾಪನ ಉಪಸಮಿತಿ ಮಾರುಕಟ್ಟೆ ಮೌಲ್ಯ ಪರಿಷ್ಕರಿಸಿದೆ. ದರ ಪಟ್ಟಿನಲ್ಲಿ ಹೊಸ ಯೋಜನೆಯನ್ನು ಸೇರ್ಪಡೆ ಮಾಡಿ ಪರಿಷ್ಕೃತ ದರ ಪಟ್ಟಿಯ ಕರಡು ಪ್ರತಿಯನ್ನು ಸಾರ್ವಜನಿಕ ಅವಗಾಹನೆಗೆ ತರಲು ಪುತ್ತೂರು ವ್ಯಾಪ್ತಿಯ ತಾಲೂಕು ಕಚೇರಿ, ಉಪನೋಂದಣಾ ಕಚೇರಿ, ಪುತ್ತೂರು ನಗರಸಭೆ ಕಚೇರಿ ಹಾಗೂ ಕಡಬ ತಾಲೂಕು ಕಚೇರಿ, ಕಡಬ ಪಟ್ಟಣ ಪಂಚಾಯತ್‍ ನ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಸಾರ್ವಜನಿಕರು 15 ದಿನಗಳ ಒಳಗೆ ತಮ್ಮ ಆಕ್ಷೇಪಣೆ, ಅಭಿಪ್ರಾಯಗಳಿದ್ದಲ್ಲಿ ಸದಸ್ಯ ಕಾರ್ಯದರ್ಶಿ, ಮಾರುಕಟ್ಟೆ ಮೌಲ್ಯ ಮಾಪನ ಉಪಸಮಿತಿ ಪುತ್ತೂರು ಹಾಗೂ ಪುತ್ತೂರು ಉಪನೋಂದಣಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಉಪನೋಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top