ಪುತ್ತೂರು: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತರದಲ್ಲಿ 48 ದಿನಗಳ ಪರ್ಯಂತ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಅಂಗವಾಗಿ ಪುತ್ತೂರಿನಿಂದ ಆ.20 ರಂದು ಬೃಹತ್ ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಇದರ ಅಂಗವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹೊರೆಕಾಣಿಕೆ ಕಾರ್ಯಾಲಯ ಶುಕ್ರವಾರ ಉದ್ಘಾಟನೆಗೊಂಡಿತು.
ಈಗಾಗಲೇ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಜು.16 ರಿಂದ ಆರಂಭಗೊಂಡಿದ್ದು, ಆ.25 ರ ತನಕ ನಡೆಯಲಿದೆ. ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಆ.25 ರಿಂದ ಆರಂಭಗೊಂಡು ಆ.27 ರ ತನಕ ನಡೆಯಲಿದೆ.
ಕಾರ್ಯಾಲಯವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಬಿ.ಐತ್ತಪ್ಪ ನಾಯ್ಕ್, ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು, ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಪ್ರಧಾನ ಕಾರ್ಯದರ್ಶಿ ನವೀನ್ ಕುಲಾಲ್, ಹೊರೆಕಾಣಿಕೆ ಸಮಿತಿ ಸಂಚಾಲಕ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ,, ಸಂಘಟನಾ ಕಾರ್ಯದರ್ಶಿ ಅಜಿತ್ ರೈ ಹೊಸಮನೆ, ಸಮಿತಿ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.