ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಹಾಗೂ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರ ಜಂಟಿ ಆಶ್ರಯದಲ್ಲಿ ಸವಣೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟವು ಶುಕ್ರವಾರ ಸರಸ್ವತಿ ಶಾಲಾ ಕ್ರೀಡಾಂಗಣದಲ್ಲಿ ಜರುಗಿತು.
ನರಿಮೊಗರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಿ ನಿತ್ಯಾನಂದ ಪಂಜಳ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ ಅಧ್ಯಕ್ಷತೆ ವಹಿಸಿದ್ದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು, ಆಡಳಿತಾಧಿಕಾರಿ ಶುಭಾ ಅವಿನಾಶ್, ನೋಡಲ್ ಅಧಿಕಾರಿ ಬಾಲಕೃಷ್ಣ ಸವಣೂರು ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ದಿವ್ಯ ಸ್ವಾಗತಿಸಿ, ಸಹ ಶಿಕ್ಷಕಿ ಶೈಲಜಾ ವಂದಿಸಿದರು. ಸಹ ಶಿಕ್ಷಕಿ ಶ್ರೀಲಕ್ಷ್ಮೀ ಕಾರ್ಯಕ್ರಮ ನಿರ್ವಹಿಸಿದರು.
ಸಮಾರೋಪ :
ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್ ವಹಿಸಿದ್ದರು. ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ, ಶಾಲಾ ಸುರಕ್ಷತಾ ಸಮಿತಿಯ ಸುರೇಶ್ ಭಟ್ ಸೂರ್ಡೇಲು ವೇದಿಕೆಯಲ್ಲಿ ಉಪಸ್ಥಿತರಿದ್ದು ವಿಜೇತರಿಗೆ ಬಹುಮಾನ ವಿತರಿಸಿದರು. ಸಹ ಶಿಕ್ಷಕ ರಾಜಾರಾಮ ನೆಲ್ಲಿತ್ತಾಯ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಎಂ ವಂದಿಸಿದರು.
ಬಹುಮಾನ ವಿಜೇತರು :
ಬಾಲಕರು ಪ್ರಥಮ : ಪ್ರತಿಭಾ ಪಟ್ಟೆ, ದ್ವಿತೀಯ : ಈಡನ್ ಗ್ಲೋಬಲ್ ಬೆಳಂದೂರು. ಬಾಲಕಿಯರು : ಪ್ರಥಮ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಂಡೂರು, ದ್ವಿತೀಯ : ಸರಸ್ವತಿ ವಿದ್ಯಾ ಮಂದಿರ ನರಿಮೊಗರು.