ಪುತ್ತೂರು: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯ ದಶಮಾನೋತ್ಸವ ಕಾರ್ಯಕ್ರಮ ಆ.25ರಂದು 8.30ರಿಂದ ನಾಗರಾಜ ಭಟ್ ಸುಳ್ಯ ನೇತೃತ್ವದಲ್ಲಿ ನಡೆಯಲಿದೆ ಎಂದು ಪೂಜಾ ಸಮಿತಿಯ ಗೌರವಾಧ್ಯಕ್ಷೆ ಸರೋಜಿನಿ ವಿ. ನಾಗಪ್ಪಯ್ಯ ಹೇಳಿದರು.
ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ 8.30ರಿಂದ ಸಂಕಲ್ಪ ವ್ರತಧಾರಣೆ, 11ಗಂಟೆಗೆ ದಶಮಾನೋತ್ಸವ ಸಭಾ ಕಾರ್ಯಕ್ರಮ, ಅಭಿನಂದನೆ, ಲಕ್ಷ್ಮೀ ಕಟಾಕ್ಷ ಅದೃಷ್ಟ ಚೀಟಿಯ ಡ್ರಾ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, 3ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ನಾಟ್ಯ ವೈಭವ, 4.30ರಿಂದ ದಶಸಂಭ್ರಮ – ಸಾಧಕರಿಗೆ ಸನ್ಮಾನ ನಡೆಯಲಿದೆ. ಸುಮಾರು 1500 ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ದಶಸಂಭ್ರಮ – ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಪೂಜಾ ಸಮಿತಿಯ ಅಧ್ಯಕ್ಷೆ ಅಮಿತಾ ಸೀತಾರಾಮ ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರಳ್ಯ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಪದಡ್ಕ ವಿಶ್ವ ಕಲಾನಿಕೇತನ ಇನ್ ಸ್ಟಿಟ್ಯೂಟ್ ಆಫ್ ಆಂಡ್ ಕಲ್ಚರ್ ನ ನಯನ ವಿ. ರೈ ಕುದ್ಕಾಡಿ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ವೀಣಾ ಎನ್. ಅವರಿಗೆ ಸನ್ಮಾನ ನಡಯಲಿದೆ ಎಂದರು.
ಪೂಜಾ ಸಮಿತಿಯ ಅಧ್ಯಕ್ಷೆ ಅಮಿತಾ ಸೀತಾರಾಮ ಮನೋಳಿತ್ತಾಯ ಪಂಚೋಡಿ ಮಾತನಾಡಿ, ದಶಮಾನೋತ್ಸವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಕುಂಟಾರು ವಾಸುದೇವ ತಂತ್ರಿಗಳು ಆಶೀರ್ವಚನ ನೀಡಲಿದ್ದು, ವಿವೇಕಾನಂದ ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ ಭಾಗವಹಿಸಲಿದ್ದಾರೆ. ಅರ್ಚಕ ರವೀಂದ್ರ ಮಾಣಿಲತ್ತಾಯ, ಪರಿಚಾರಕ ಸುಬ್ರಹ್ಮಣ್ಯ ರಾವ್, ನಾದಸೇವೆ ಶ್ರೀನಿವಾಸ ಪಿ., ಗುಮಾಸ್ತ ಉಮೇಶ ರಾವ್, ನಿವೃತ್ತ ಯೋಧ ಪ್ರವೀಣ ಬಿ., ಎಸ್. ಎಸ್. ಎಲ್. ಸಿ.ಯಲ್ಲಿ ವಿಶೇಷ ಸಾಧನೆ ಮಾಡಿದ ಅವನಿ ಎ. ಅವರಿಗೆ ಅಭಿನಂದನೆ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರತಿ ರಮೇಶ್ ಪೂಜಾರಿ ಮುಂಡ್ಯ, ಕಾರ್ಯದರ್ಶಿ ಅರುಣ ಸತೀಶ್ ಶೆಟ್ಟಿ ಮುಂಡ್ಯ, ಕೋಶಾಧಿಕಾರಿ ಕೋಮಲ ಕೃಷ್ಣಪ್ಪ ಗೌಡ ನೀರಳಿಕೆ ಉಪಸ್ಥಿತರಿದ್ದರು.