ಪುತ್ತೂರು: ಕಡಬ, ಉಪ್ಪಿನಂಗಡಿ, ನೆಲ್ಯಾಡಿ, ಕುಂಬ್ರ, ಆಲಂಕಾರು, ಕಾಣಿಯೂರು, ಪುತ್ತೂರು ಸೇರಿದಂತೆ 9 ಶಾಖೆಗಳನ್ನು ಹೊಂದಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ 2022-23ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಾಡಿದ ವಿಶಿಷ್ಟ ಸಾಧನೆಗಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಆ.19 ರಂದು ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಪ್ರಶಸ್ತಿ ಸ್ವೀಕರಿಸಿದರು. ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಹಾಗೂ ನಿರ್ದೇಶಕರು ಪ್ರಶಸ್ತಿ ಪ್ರದಾನ ಮಾಡಿದರು.
ಸತತ ಎರಡನೇ ಬಾರಿ ಈ ಪ್ರಶಸ್ತಿಗೆ ಸಂಘ ಭಾಜನವಾಗಿದೆ.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಲೋಕೇಶ್ ಚಾಕೋಟೆ, ಸತೀಶ್ ಪಾಂಬಾರು, ರಾಮಕೃಷ್ಣ ಕರ್ಮಲ, ಎಸ್‍ಸಿಡಿಸಿಸಿ ಬ್ಯಾಂಕ್ ನಿರ್ದೇಶಕರು ಉಪಸ್ಥಿತರಿದ್ದರು.