ಪುತ್ತೂರು: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತರದಲ್ಲಿ 48 ದಿನಗಳ ಪರ್ಯಂತ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಅಂಗವಾಗಿ ಪುತ್ತೂರಿನಿಂದ ತೆರಳುವ ಬೃಹತ್ ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ಚಾಲನೆ ನೀಡಲಾಯಿತು.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿ, ಎಲ್ಲೆಡೆ ನಡೆಯುವ ಬ್ರಹ್ಮಕಲಶೋತ್ಸವ ಸೇರಿದಂತೆ ಇನ್ನಿತರ ಧಾರ್ಮಿಕ ಕೇಂದ್ರಗಳಿಗೆ ಹೊರೆಕಾಣಿಕೆ ಸಮರ್ಪಣೆಯಾಗುತ್ತಿದೆ. ಅದರಂತೆ ಮಾಣಿಲ ಮಹಾಲಕ್ಷ್ಮೀ ಕ್ಷೇತ್ರದ ಸ್ವಾಮೀಜಿಯವರು ಪ್ರತಿಯೊಂದು ಧಾರ್ಮಿಕ ಕೇಂದ್ರಗಳ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗುವುದನ್ನು ನಾವು ಕಾಣುತ್ತೇವೆ. ಈ ನಿಟ್ಟಿನಲ್ಲಿ ಮಾಣಿಲ ಕ್ಷೇತ್ರದಲ್ಲಿ ನಡೆಯುವ ಧಾರ್ಮಿ ಕಾರ್ಯಕ್ರಮಗಳಲ್ಲಿ ನಾವು ಪಾಲ್ಗೊಳ್ಳುವುದು ಅತೀ ಅಗತ್ಯ. ಇದೀಗ ಹೊರೆಕಾಣಿಕೆ ಜತೆಗೆ ದಾನಿಗಳಿಂದ ಪಡೆದ ಐದು ಲಕ್ಷ ರೂ. ನೀಡುತ್ತಿರುವುದು ಸಂಘಟಕರ ಕಾರ್ಯ ಶ್ಲಾಘನೀಯ ಎಂದರು.
ಮಾಜಿ ಶಾಸಕ ಸಂಜೀವ ಮಠಂದೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ರವೀಂದ್ರನಾಥ ರೈ ಬಳ್ಳಮಜಲು, ರಾಮದಾಸ್, ವೀಣಾ ಬಿ.ಕೆ., ಶೇಖರ್ ನಾರಾವಿ, ಕಾಂಗ್ರೆಸ್ ಮುಖಂಡರಾದ ಹೇಮನಾಥ ಶೆಟ್ಟಿ ಕಾವು, ಜಯಪ್ರಕಾಶ್ ಬದಿನಾರು, ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ, ಮಾಜಿ ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಹೊರೆಕಾಣಿಕೆ ಸಮಿತಿ ಅಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು, ಸಂಚಾಲಕ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಸದಸ್ಯರಾದ ಡಾ.ಸುರೇಶ್ ಪುತ್ತೂರಾಯ, ಮತ್ತಿತರರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ನವೀನ್ ಕುಲಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
(ಫೋಟೊ ಇದೆ… 20ಕೆಎಂ-ಮಾಣಿಲ)