ಪುತ್ತಿಲ ಪರಿವಾರದ ನಗರ, ಗ್ರಾಮಾಂತರ ಬೂತ್ ಅಧ್ಯಕ್ಷ, ಕಾರ್ಯದರ್ಶಿಗಳ ಸಮಾಗಮ

ಪುತ್ತೂರು: ಒಗ್ಗಟ್ಟಿನಿಂದ ಮಾಡುವ ಕೆಲಸದಲ್ಲಿ ಯಶಸ್ಸು ಲಭಿಸುತ್ತದೆ. ಸಾಮಾಜಿಕ ಚಟುವಟಿಕೆಯಿಂದ ನಿಜವಾದ ಸಂತೋಷವನ್ನು ಗಳಿಸಬಹುದು. ಜಯ ಸಿಗುವ ತನಕ ಪ್ರಯತ್ನವನ್ನು ಕೈಬಿಡಬಾರದು ಎಂದು ನಿವೃತ್ತ ಪ್ರಾಂಶುಪಾಲ ಬಿ. ವಿ. ಸೂರ್ಯನಾರಾಯಣ ಹೇಳಿದರು.

ಅವರು ಭಾನುವಾರ ಪುತ್ತೂರು ಕೋಟೆಚಾ ಹಾಲ್ ನಲ್ಲಿ ನಗರ ಮತ್ತು ಗ್ರಾಮಾಂತರದ ಬೂತ್ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಪುತ್ತಿಲ ಪರಿವಾರದ ಸಮಾಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ ಪುತ್ತಿಲ ಮಾತನಾಡಿ, ರಾಜಕೀಯ ಉದ್ದೇಶ ಮಾತ್ರವಲ್ಲದೆ, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಶಕ್ತಿ ತುಂಬುವ ವ್ಯವಸ್ಥೆಗೆ ಪರಿವಾರದ ಮೂಲಕ ಮಾಡಲಾಗುತ್ತಿದೆ. ಸಾಮಾಜಿಕ ಬದ್ಧತೆಯ ಜತೆಗೆ ಹೊಸ ನಾಯಕರನ್ನು ಸೃಷ್ಟಿಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಪರಿವಾರದ ವಿಸ್ತರಿಸುವ ಕಾರ್ಯವನ್ನು ಮಾಡಲಾಗುವುದು ಎಂದು ತಿಳಿಸಿದರು.



































 
 

ಸಮಾರಂಭದಲ್ಲಿ ದೇಶ ಸೇವೆಯ ಸಂದರ್ಭ ಅಪಘಾತದಲ್ಲಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವಿವಿಧ ಗ್ರಾಮದ ಪುತ್ತಿಲ ಪರಿವಾರದಿಂದ ಕೈಗೊಂಡ ಸಾಮಾಜಿಕ ಚಟುವಟಿಕೆಯ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಪುತ್ತಿಲ ಪರಿವಾರದ ಸಾಮಾಜಿಕ ಚಟುವಟಿಕೆಗೆ ಸಹಾಯ ನೀಡುವವರ ಅನುಕೂಲಕ್ಕಾಗಿ ಕ್ಯೂ ಆರ್ ಕೋಡ್ ಬಿಡುಗಡೆ ಮಾಡಲಾಯಿತು. ಮಹಿಳಾ ಪರಿವಾರದ ಪದಾಧಿಕಾರಿಗಳನ್ನು ಘೋಷಿಸಲಾಯಿತು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಪುತ್ತಿಲ ಪರಿವಾರ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ ವಹಿಸಿದ್ದರು. ಧಾರ್ಮಿಕ ಚಿಂತಕ ಶ್ರೀಕೃಷ್ಣ ಉಪಾಧ್ಯಾಯ, ಗೌರವ ಸಲಹೆಗಾರ ಸುನಿಲ್ ಬೋರ್ಕರ್, ಭೀಮ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಶರಣ್ಯ, ಶ್ರಾವ್ಯ ಪ್ರಾರ್ಥಿಸಿದರು. ಪುತ್ತಿಲ ಪರಿವಾರದ ಕಾರ್ಯದರ್ಶಿ ರವಿ ಕುಮಾರ್ ಮಠ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು ಪ್ರಸ್ತಾವನೆಗೈದರು. ನಗರ ಅಧ್ಯಕ್ಷ ಅನಿಲ್ ತೆಂಕಿಲ ವಂದಿಸಿದರು. ಮಾಧ್ಯಮ ವಕ್ತಾರ ನವೀನ್ ರೈ ಪಂಜಳ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top