ಪುತ್ತೂರು: ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಧೈಹಿಕ ಚಟುವಟಿಕೆ ದೇಹದ ಬೆಳವಣಿಗೆ ಜತೆಗೆ ಅವರಲ್ಲಿನ ಪ್ರತಿಭೆಗಳನ್ನು ಗುರುತಿಸಲು ಅತೀ ಅಗತ್ಯ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಅವರು ಸರ್ವೆ ಕಲ್ಪಣೆ ಪ್ರೌಢ ಶಾಲೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರೌಢ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಸರಕಾರಿ ಶಾಲೆಗಳ ಕಡೆಗಣನೆ ಸಲ್ಲದು. ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತ ಹೆಚ್ಚಿನ ಸೌಲಭ್ಯಗಳು ದೊರೆಯುವಂತಾಗಲಿದೆ. ಖಾಸಗಿ ಶಾಲೆಯನ್ನು ತೊರೆದು ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಬೇಕು ಎಂಬ ಭಾವನೆ ಉಂಟಾಗುವಷ್ಟರ ಮಟ್ಟಿಗೆ ಸರಕಾರಿ ಶಾಲೆಗಳು ಅಭಿವೃದ್ದಿಯಾಗಬೇಕಿದೆ ಈ ನಿಟ್ಟಿನಲ್ಲಿ ಸರಕಾರದ ವಿವಿಧ ಯೋಜನೆಗಳಿದ್ದು ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಕಲ್ಪಣೆ ಪ್ರೌಢ ಶಾಲಾ ಕಾರ್ಯಾಧ್ಯಕ್ಷ ಸಿದ್ದಿಕ್ ಸುಲ್ತಾನ್, ಮುಂಡೂರು ಗ್ರಾಪಂ ಸದಸ್ಯ ಕಮಲೇಶ್, ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರಿ ಬೊಳ್ಲಾಡಿ, ಯುವ ಉದ್ಯಮಿ ಮಜೀದ್ ಬಾಳಯ, ಎಸ್‌ಡಿಎಂಸಿ ಸದಸ್ಯ ಅಝೀಝ್ ರೆಂಜಲಾಡಿ, ಮಾಜಿ ಗ್ರಾಪಂ ಸದಸ್ಯ ಗಣೇಶ್ ನೇರೋಲ್ತಡ್ಕ, ರಝಾಕ್ ಕೂಡುರಸ್ತೆ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಜಯರಾಂ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕಿ ಕಾಂಚನ ವಂದಿಸಿದರು.