ನಾಟಿ ವೈದ್ಯರಿಗೆ ಸನ್ಮಾನ ಹಾಗೂ ಜಲ ಮರುಪೂರಣ ಮಾಹಿತಿ ಕಾರ್ಯಕ್ರಮ

ಪುತ್ತೂರು : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಗ್ರಾಮ ವಿಕಾಸ ಸಂಘ, ವಿವೇಕ ಸಂಜೀವಿನಿ ಹಾಗೂ ಬನ್ನೂರು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ನಾಟಿ ವೈದ್ಯರಿಗೆ ಸನ್ಮಾನ ಹಾಗೂ ಜಲ ಮರುಪೂರಣ ಮಾಹಿತಿ ಕಾರ್ಯಕ್ರಮ ಬನ್ನೂರು ಗ್ರಾಮದ ಕಂಜೂರುನಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಕಲಿಯುಗ ಸೇವ ಸಮಿತಿ ಸಂಚಾಲಕ ಸಂಪತ್ ಕುಮಾರ್ ಜೈನ್ ಮಾತನಾಡಿ, ಜೀವನಕ್ಕೆ ನೀರು ಅತ್ಯಗತ್ಯ ಸತತ ಬರಗಾಲದ ಮೂಲಕ ಜಾಗತಿಕ ಹವಾಮಾನ ಬದಲಾವಣೆಯ ಪ್ರತಿಕೂಲ ಪರಿಣಾಮವನ್ನು ನಾವು ಎದುರಿಸುತ್ತಿದ್ದೇವೆ. ನೀರಿನ ಸಂರಕ್ಷಣೆ, ಜಲ ಸಾಕ್ಷರತೆ, ಜಲಮೂಲಗಳ ಪುನಶ್ಚೇತನ ಮತ್ತು ಹಸಿರು ಹೊದಿಕೆಯನ್ನು ಗಮನದಲ್ಲಿಟ್ಟುಕೊಂಡು ಜಲ ಸಂರಕ್ಷಣೆ ಕಾರ್ಯಗಳನ್ನು ಕೈಗೊಳ್ಳುವುದು ಅತ್ಯಗತ್ಯ. ಬೇಸಿಗೆಯಲ್ಲಿ ಅತಿಯಾದ ನೀರಿನ ಬವಣೆ ನೀಗಿಸುವ ಉದ್ದೇಶದಿಂದ ಜಲಮರುಪೂರಣ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಸಾರ್ವಜನಿಕರು ತಮ್ಮ ಬಾವಿ  ಹಾಗೂ  ಬೋರ್‌ವೆಲ್‌ಗಳಿಗೆ ನೀರು ಇಂಗಿಸಲು ಮುಂದಾದರೆ ಅಂತರ್ಜಲ ಮಟ್ಟವನ್ನು ವೃದ್ಧಿಸಬಹುದು ಎಂದು ಹೇಳಿದರು.

ಈ  ಸಂದರ್ಭದಲ್ಲಿ ಇಬ್ಬರು ನಾಟಿ ವೈದ್ಯೆರಾದ ಗಿರಿಜಾ ಮತ್ತು ಗಿರಿಜಾ ಅವರನ್ನು ಸನ್ಮಾನಿಸಲಾಯಿತು. ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯೆ ಇಂದಿರಾ ಬಿ. ಕೆ. ಸನ್ಮಾನ ನೆರವೇರಿಸಿದರು. ಬನ್ನೂರು ಗ್ರಾಮ ಪಂಚಾಯತ್‌  ಅಧ್ಯಕ್ಷೆ ಸ್ಮಿತಾ ಅಧ್ಯಕ್ಷತೆ ವಹಿಸಿದ್ದರು.  ಬನ್ನೂರು ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಶೀನಪ್ಪ ಕುಲಾಲ್  ಮತ್ತು ಸದಸ್ಯರು ಉಪಸ್ಥಿತರಿದ್ದರು.



































 
 

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾಲೇಜಿನ ಉಪನ್ಯಾಸಕಿ ಅನುಪಮಾ ಸ್ವಾಗತಿಸಿ, ಗ್ರೀಷ್ಮ ವಂದಿಸಿದರು. ಉಪನ್ಯಾಸಕಿ ಸುಮ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top