ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪೆನಿ ಹಾಗೂ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಜಂಟಿ ಆಶ್ರಯದಲ್ಲಿ ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಶೇರು ಪ್ರಮಾಣ ಪತ್ರ ವಿತರಣಾ ಸಮಾರಂಭ ಆ.28 ಸೋಮವಾರ ಬೆಳಿಗ್ಗೆ 10 ಗಂಟೆಗೆ ಪುತ್ತೂರು ಜೈನ ಭವನದಲ್ಲಿ ನಡೆಯಲಿದೆ.
ಮುಖ್ಯ ಅತಿಥಿಯಾಗಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಎಂ. ಪಾಲ್ಗೊಳ್ಳಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ.ರಶ್ಮಿ ಆರ್. ಮಾಹಿತಿ ನೀಡಲಿದ್ದಾರೆ. ಅತಿಥಿಗಳಾಗಿ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ, ವಿಜಯ ಕರ್ನಾಟಕ ಸೂಪರ್ ಸ್ಟಾರ್ ಪ್ರಶಸ್ತಿ ಪುರಸ್ಕೃತ ಕೃಷಿಕ ಕಡಮಜಲು ಸುಭಾಷ್ ರೈ ಭಾಗವಹಿಸಲಿದ್ದಾರೆ.
ಪುತ್ತೂರು ಮಾನಸಗಂಗಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಎನ್. ಉಪಸ್ಥಿತರಿರುವರು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.