ಸುಳ್ಯ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಒಂದೂವರೆ ವರ್ಷದ ಚಿರತೆ ಮರಿಯೊಂದು ಉರುಳಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಜಯರಾಮ ಪಡ್ಡಂಬೈಲು ಹಾಗೂ ಪೃಥ್ವಿ ಪಡ್ಡಂಬೈಲು ಎಂಬವರಿಗೆ ಸಂಬಂಧಿಸಿ ಉರುಳು ಪತ್ತೆಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಮಂಗಳವಾರ ಮಧ್ಯಾಹ್ನ ವೇಳೆ ಚಿರತೆ ಉರುಳಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳಿಗೆ ಮಾಹಿತಿ ತಿಳಿದ ತಕ್ಷಣ ಪರಿಶೀಲನೆ ನಡೆಸಿದ್ದಾರೆ. ಆದಾಗಲೇ ಚಿರತೆ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.