ಚಾರ್ವಾಕ : ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸತತ 10 ವರ್ಷದಲ್ಲಿ ಪ್ರಶಸ್ತಿ ಪಡೆದು ಮಾದರಿ ಸಂಘವಾಗಿ ಮೂಡಿ ಬಂದಿರುವ ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸೇವೆಯನ್ನು ಪರಿಗಣಿಸಿ ಶ್ರೀ ಕ್ಷೇತ್ರ ದೈಪಿಲ ಸೇವಾ ಪ್ರತಿಷ್ಠಾನದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಶ್ರೀ ಕ್ಷೇತ್ರ ದೈಪಿಲ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಆರ್. ಗೌಡ ಅಭಿನಂದನಾ ಪತ್ರ ನೀಡಿ ಗೌರವಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಮಾಚಿಲ ವೆಂಕಪ್ಪ ವಹಿಸಿದ್ದರು. ವೇದಿಕೆಯಲ್ಲಿ ಕುಕ್ಕೇನಾಥ ದೇವಸ್ಥಾನದ ಅಡಳಿತ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ, ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಗೌಡ ಕರಂದ್ಲಾಜೆ, ಚಾರ್ವಾಕ ಹಾಲುತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ಉಪಾಧ್ಯಕ್ಷ ಬಾಲಕೃಷ್ಣ ಇಡ್ಯಡ್ಕ, ಅನುವಂಶಿಕ ಮೊಕ್ತೇಸರ ನಾರ್ಣಪ್ಪ ಗೌಡ ಮಾಚಿಲ ಉಪಸ್ಥಿತರಿದ್ದರು.
ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ನಿರ್ದೇಶಕ ಪ್ರವೀಣ್ ಕುಂಟ್ಯಾನ ಸ್ವಾಗತಿಸಿದರು. ವಿಶ್ವನಾಥ ಅಂಬುಲ ವಂದಿಸಿದರು. ವಿಜಿತ್ ಮಾಚಿಲ ಕಾರ್ಯಕ್ರಮ ನಿರೂಪಿಸಿದರು. ಧರ್ಣಪ್ಪ ಗೌಡ ಅಂಬುಲ ಸಹಕರಿಸಿದರು. ನಿರ್ದೇಶಕರು, ಆಡಳಿತ ಮಂಡಳಿಯವರಿಗೆ ಸೇವಾ ಪ್ರತಿಷ‍್ಠಾನ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.