ವಿಟ್ಲ : ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿಯ ಮನೆಯಲ್ಲಿ ಸೆ.6 ರಂದು ನಿಧನರಾಗಿದ್ದಾರೆ.
ಮಂಜು ವಿಟ್ಲರವರು ಧಾರ್ಮಿಕ,ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಹಿರಿಯ ತರಬೇತುದಾರರಾಗಿ, ಚಿತ್ರಕಲಾವಿದರಾಗಿ, ಕಾರ್ಯಕ್ರಮ ನಿರೂಪಕರಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಅಪಾರ ಜನಮನ್ನಣೆ ಗಳಿಸಿದ್ದರು.
ಮೃತರು ಪುತ್ರಿ, ಸಹೋದರ, ಸಹೋದರಿಯರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.