ಮಂಗಳೂರು: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕದ್ರಿ ಸಮೀಪ ಭಾನುವಾರ ರಾತ್ರಿ ನಡೆದಿದೆ.
ಬಿಜೈಯ ಅಪಾರ್ಟ್ ಮೆಂಟಿನಲ್ಲಿ ಕೆಲಸ ಮಾಡುತ್ತಿದ್ದ ದಂಪತಿಯ ಪುತ್ರಿ ಆತ್ಮಹತ್ಯೆ ಮಾಡಿಕೊಂಡವರು. ನಗರದ ಕಾಲೇಜೊಂದರಲ್ಲಿ ಈಕೆ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದರು.
ಭಾನುವಾರ ರಾತ್ರಿ ಕೆಲಸಕ್ಕೆಂದು ಹೊರಹೋದಾಗ ಘಟನೆ ನಡೆದಿದೆ. ಫ್ಯಾನಿಗೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ.
ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
























