ತಿರುವನಂತಪುರಂ: ಹಲವು ಸಾವು ನೋವಿಗೆ ಕಾರಣವಾಗಿದ್ದ ನಿಫಾ ವೈರಸ್ ಕೇರಳದಲ್ಲಿ ಮತ್ತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸರಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
ಕೇರಳದಲ್ಲಿ ಇಬ್ಬರ ಅಸಹಜ ಸಾವು ಸಂಭವಿಸಿದ್ದು, ಮೃತರ ಸಂಬಂಧಿಕರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜ್ವರದಿಂದ ಬಳಲುತ್ತಿದ್ದ ಕಾರಣ ಕೋಝಿಕ್ಕೋಡ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಸಾವನ್ನಪ್ಪಿದ್ದು, ಸಾವಿಗೆ ನಿಫಾ ವೈರಸ್ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ರೋಗಿಯ ವೈದ್ಯಕೀಯ ಪರೀಕ್ಷೆಯ ಫಲಿತಾಂಶ ಇನ್ನಷ್ಟೇ ಬರಬೇಕಿದೆ.ಇಬ್ಬರ ಅಸಹಜ ಸಾವು ಉಂಟಾದ ಹಿನ್ನೆಲೆ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ನೇತೃತ್ವದಲ್ಲಿ ಪರಿಸ್ಥಿತಿ ಬಗ್ಗೆ ತಿಳಿಯಲು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಉನ್ನತಮಟ್ಟದ ಸಭೆಯನ್ನು ನಡೆಸಲಾಗಿದೆ.