ಮಂಗಳೂರು: ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ನಾಲ್ಕಕ್ಕೇರಿಕೆಗೊಂಡಿದೆ. ಇದರ ಬೆನ್ನಲ್ಲೇ ಮಂಗಳೂರು ಸೇರಿದಂತೆ ಕರ್ನಾಟಕ – ಕೇರಳ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಮಂಗಳವಾರ ಕೇರಳದ ಕೋಝಿಕ್ಕೋಡಿನಲ್ಲಿ ನಿಫಾ ವೈರಸ್ ಪತ್ತೆಯಾಗಿತ್ತು. ಇಬ್ಬರಲ್ಲಿ ಸೋಂಕು ಸಾಧ್ಯತೆ ಪತ್ತೆಯಾದ ಬೆನ್ನಲ್ಲೇ, ಅವರ ಸಂಬಂಧಿಕರನ್ನು ಐಸಿಯು ನಿಗಾದಲ್ಲಿರಿಸಲಾಗಿತ್ತು. ಇದೀಗ ಸೋಂಕಿತರ ಸಂಖ್ಯೆ ಹೆಚ್ಚಳಗೊಂಡಿದ್ದು, ಕೇರಳ ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ.
ಇದರ ಬೆನ್ನಲ್ಲೇ ಕೇರಳ ರಾಜ್ಯಕ್ಕೆ ಹೊಂದಿಕೊಂಡಂತಿರುವ ಕರ್ನಾಟಕದ ಗಡಿಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಜಾಗೃತಿ ಮಾಹಿತಿ ರವಾನೆ ಮಾಡಿದ್ದು, ಎಚ್ಚರದಿಂದಿರುವಂತೆ ತಿಳಿಸಲಾಗಿದೆ.