ಪುತ್ತೂರು: ಶಾಸಕರ ಅನುದಾನದಿಂದ ಪರ್ಪುಂಜ ಸ.ಹಿ.ಪ್ರಾ. ಶಾಲೆಗೆ 13.90 ಲಕ್ಷ ರೂ.ನಲ್ಲಿ ಹೊಸ ಕೊಠಡಿಗೆ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆಯನ್ನು ಜ. 1ರಂದು ಶಾಸಕ ಸಂಜೀವ ಮಠಂದೂರು ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ಯಾವುದೇ ಕೊರತೆ ಆಗಬಾರದು ಎಂಬ ನೆಲೆಯಲ್ಲಿ ಸರಕಾರ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಪುತ್ತೂರಿನ 111 ಶಾಲೆಗಳಿಗೆ ನೂತನ ಕೊಠಡಿ ನಿರ್ಮಾಣಕ್ಕಾಗಿ 5 ಕೋಟಿ ರೂ. ಅನುದಾನ ನೀಡಿದ್ದು, ಗುಣಮಟ್ಟದ ಕಟ್ಟಡ ನಿರ್ಮಾಣ ಆಗಲಿದೆ ಎಂದರು.
ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಶಕ್ತಿ ಕೇಂದ್ರ ಅಧ್ಯಕ್ಷರಾದ ರಾಜೇಶ್ ಪರ್ಪುಂಜ, ನಿತೀಶ್ ಶಾಂತಿವನ, ಜಯಂತ್, ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಕ್ಷದ ಪ್ರಮುಖರು, ಸಾರ್ವಜನಿಕರು, ಶಾಲಾ ಮುಖ್ಯಗುರು, ಅಧ್ಯಾಪಕರು ಉಪಸ್ಥಿತರಿದ್ದರು