ವಿಟ್ಲ: ಇಲ್ಲಿನ ಕುದ್ದುಪದವು ನಿವಾಸಿಗಳಾದ ಸಹೋದರರು ವಿಷಪ್ರಾಶನ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ವಿಟ್ಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ವಿಷ ಸೇವನೆ ಮಾಡಿದವರು ಎಂದು ತಿಳಿದು ಬಂದಿದೆ. ಎರಡು ಪ್ರತ್ಯೇಕ ತುರ್ತುವಾಹನಗಳ ಮೂಲಕ ಅಸ್ವಸ್ಥರನ್ನು ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಓರ್ವರನ್ನು ಮಂಗಳೂರಿಗೆ ಹಾಗೂ ಇನ್ನೋರ್ವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.