ಪುತ್ತೂರು: ಗಣೇಶೋತ್ಸವದ ಸಾರ್ವತ್ರಿಕ ರಜೆಯ ಗೊಂದಲಕ್ಕೆ ತೆರೆ ಎಳೆಯಲು ದ.ಕ. ಜಿಲ್ಲಾ ಉಸ್ತುವಾರಿ ಸಚಿವರು, ದ.ಕ. ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ಸೆ. 19ರಂದು ಗಣೇಶೋತ್ಸವ ಹಬ್ಬ ಆಚರಣೆ ನಡೆಯಲಿದ್ದು, ಸೆ. 18ಕ್ಕೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಇದರಿಂದ ಕರಾವಳಿ ಭಾಗದಲ್ಲಿ ಗೊಂದಲ ಉಂಟಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ಉಂಟಾಗಿತ್ತು.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿರುವ ದ.ಕ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಸರಕಾರಿ ರಜೆಯನ್ನು ಮಾರ್ಪಡಿಸಿ ಅನುಕೂಲವಾಗುವಂತೆ ಸೆ. 19ರಂದು ರಜೆ ಘೋಷಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.