ಪುತ್ತೂರು : ಸರ್ಕಾರದ ಮುಂದಿನ ಆದೇಶ ಬರುವವರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸದಸ್ಯರನ್ನು ನೇಮಕ ಮಾಡಲಾಗಿದೆ.
ಸಮಿತಿಯ ಅಧ್ಯಕ್ಷರಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ, ಸದಸ್ಯರಾಗಿ ಎಂ. ಮಹಮ್ಮದ್ ಬಡಗನ್ನೂರು, ರೇಖಾ ಆಳ್ವ, ಹಾಗೂ ರಾಮಣ್ಣ ಪಿಲಿಂಜ ನೇಮಕಗೊಂಡಿದ್ದಾರೆ.
ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರನ್ನು ನೇಮಕ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಹಾಗಾಗಿ ತಹಸೀಲ್ದಾರ್ ಅವರೇ ಸದಸ್ಯ ಕಾರ್ಯದರ್ಶಿ ಆಗಿರುವರು.