ಮೂರ್ಛೆ ಹೋದ ಚೈತ್ರಾ, ಆಸ್ಪತ್ರೆಯ ಐಸಿಯುಗೆ ಶಿಫ್ಟ್!

ಬೆಂಗಳೂರು: ಸಿಸಿಬಿ ಪೊಲೀಸರ ವಶದಲ್ಲಿರುವ ಚೈತ್ರಾ ಕುಂದಾಪುರ ಅಸ್ವಸ್ಥಗೊಂಡಿದ್ದು, ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉದ್ಯಮಿ ಗೋವಿಂದ ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಎರಡು ದಿನಗಳ ಹಿಂದೆ ಬಂಧನಕ್ಕೊಳಗಾಗಿದ್ದರು.

ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಅವರನ್ನು ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿ ಬಳಿ ಕರೆ ತರಲಾಗಿತ್ತು. ಆದರೆ ಸಿಸಿಬಿ ಕಚೇರಿ ಬಳಿ ತಲುಪುತ್ತಿದ್ದಂತೆಯೇ ಚೈತ್ರಾ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ವೇಳೆ ಅವರ ಬಾಯಿಂದ ನೊರೆಯೂ ಬಂದಿದ್ದು, ಅವರನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಚೈತ್ರಾಗೆ ಈ ಮೊದಲಿನಿಂದಲೂ ಮೂರ್ಛೆ ರೋಗ ಇತ್ತಾ, ಔಷಧ ಪಡೆಯುತ್ತಿದ್ದರಾ ಎಂಬ ಮಾಹಿತಿಯನ್ನೂ ಕಲೆ ಹಾಕಲಾಗುತ್ತಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top