ಪುತ್ತೂರು: ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ. 19ರಂದು ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ನಡೆಯಲಿದೆ.
ದೇವಸ್ಥಾನದ ಅರ್ಚಕ ವೇ.ಮೂ. ಶಿವಪ್ರಸಾದ್ ಕಡಮಣ್ಣಾಯ ಅವರ ಪೌರೋಹಿತ್ಯದಲ್ಲಿ ನಡೆಯಲಿರುವ ಉತ್ಸವದಲ್ಲಿ ಸೆ. 19ರಂದು ಬೆಳಿಗ್ಗೆ 7 ಗಂಟೆಗೆ ಶ್ರೀ ಗಣೇಶ ವಿಗ್ರಹ ಪ್ರತಿಷ್ಠೆ, 8ಕ್ಕೆ ಭಗವಧ್ವಜಾರೋಹಣ ನಡೆದು ಬಳಿಕ ಗಣಹೋಮ, ಭಜನ ಸೇವೆ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ.
ಸಭಾಧ್ಯಕ್ಷತೆಯನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ವಹಿಸಲಿದ್ದು, ದ.ಕ. ಜಿಲ್ಲಾ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಯೋಗ ಶಿಕ್ಷಣ ಸಂಯೋಜಕ ಚಂದ್ರಶೇಖರ ದೇಲಂಪಾಡಿ ಧಾರ್ಮಿಕ ಭಾಷಣ ಮಾಡುವರು. ಮುಖ್ಯ ಅತಿಥಿಗಳಾಗಿ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ರಾವ್ ನಿಧಿಮುಂಡ ಪಾಲ್ಗೊಳ್ಳುವರು. ಸಭಾ ಕಾರ್ಯಕ್ರಮದ ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ 3ಕ್ಕೆ ಭಗವಾಧ್ವಜಾವರೋಹಣ ನಡೆದು ಶ್ರೀ ವಿನಾಯಕನ ಆಕರ್ಷಕ ಶೋಭಾಯಾತ್ರೆ ಹೊರಟು ಆಮ್ಚಿನಡ್ಕ ಸೀರೆ ಹೊಳೆಯಲ್ಲಿ ವಿಗ್ರಹ ಜಲಸ್ಥoಭನ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಸಮಿತಿ ಅಧ್ಯಕ್ಷ ನವೀನ್ ನನ್ಯ ಪಟ್ಟಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























