ಪುತ್ತೂರು: ದ.ಕ. ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಕರಾವಳಿಯಲ್ಲಿ ಸರಾಸರಿ 4ರಿಂದ 5 ಸಾವಿರ ಮಿ.ಮೀ. ಮಳೆಯಾಗುತ್ತಿದೆ. ಈ ಬಾರಿ 3.100 ಮಿ.ಮೀ. ಮಾತ್ರ ಮಳೆಯಾಗಿದೆ. ಇದು ಕೃಷಿ ಕಾಯಕಕ್ಕೆ ಕಂಠಕವಾಗಿದ್ದು, ರೈತರು ಕೃಷಿ ಕಾರ್ಯ ಮಾಡದೆ ಕಂಗಾಲಾಗಿದ್ದಾರೆ. ಮುಂದಿನ ದಿನಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ, ಕುಡಿಯುವ ನೀರು ಸಹಿತ ಕೃಷಿಗೆ ನೀರಿನ ಅಭಾವ ಉಂಟಾಗಲಿದೆ.
ಈಗಾಗಲೇ ಸರಕಾರ ಕೆಲವು ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿದ್ದು, ಈ ಪೈಕಿ ಮಂಗಳೂರು, ಮೂಡಬಿದ್ರೆ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿದೆ. ಸರಕಾರ ತಕ್ಷಣ ಎಚ್ಚೆತ್ತುಕೊಂಡು ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ, ಬೆಳ್ತಂಗಡಿ ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.