ವೇಣೂರು : ಜೀಪೊಂದರಲ್ಲಿ ವಾಹನದಲ್ಲಿ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕುತ್ಲೂರು ಎಂಬಲ್ಲಿ ನಡೆದಿದೆ.
ಕೇರಳ ತೋಡಪುಡ ತಾಲೂಕು, ಇಡ್ಕಿ ನಿವಾಸಿ ತೋಮಸ್ (34), ಬೆಳ್ತಂಗಡಿ ಕುತ್ಲೂರು ನಿವಾಸಿ ರಂಜಿತ್ (31) ಬಂಧಿತ ಆರೋಪಿಗಳು.
ಸೋಮವಾರ ಬೆಳಿಗ್ಗೆ ಬೆಳ್ತಂಗಡಿ ತಾಲೂಕಿನ ಕುತ್ಲೂರು ಎಂಬಲ್ಲಿ ಜೀಪಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಿದ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸಿ, ಒಂದು ಗಂಡು ಕರು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಜೀಪನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ವೇಣೂರು ಠಾಣೆಯಲ್ಲಿ ಅ.ಕ್ರ ನಂಬ್ರ 58-2023 ಕಲಂ: 5,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧ್ಯಾದೇಶ 2020 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.