ಅ. 10: ಡಾ.ಶಿವರಾಮ ಕಾರಂತರ 122ನೇ ಜನ್ಮದಿನ, ಪ್ರಶಸ್ತಿ ಪ್ರದಾನ | ಐದು ಮಂದಿಯ ಸಮಿತಿಯಲ್ಲಿ ಯಾರ್ಯಾರಿದ್ದಾರೆ? | ಪ್ರಶಸ್ತಿಗೆ ಆಯ್ಕೆ ಪ್ರಕ್ರಿಯೆ ಹೀಗೆ ನಡೆಯಲಿದೆ!!

ಪುತ್ತೂರು: ಅ.10ರಂದು ಪರ್ಲಡ್ಕ ಡಾ. ಶಿವರಾಮ ಕಾರಂತ ಬಾಲವನದಲ್ಲಿ ನಡೆಯಲಿರುವ ಕಾರಂತರ 122ನೇ ಜನ್ಮ ದಿನೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಐದು ಮಂದಿಯ ಸಮಿತಿಯನ್ನು ರಚಿಸಲಾಗಿದೆ.

ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಸಮಿತಿಗೆ ಆಯ್ಕೆ ಮಾಡಲಾಗಿದೆ.

ಸಮಿತಿ ಅಧ್ಯಕ್ಷರಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಪದನಿಮಿತ್ತ ಕಾರ್ಯದರ್ಶಿಯಾಗಿ ಸಹಾಯಕ ಆಯುಕ್ತ ಗಿರೀಶ್ ನಂದನ್, ಸದಸ್ಯರಾಗಿ ಬಿಳಿಯೂರುಕಟ್ಟೆ ಸ.ಪ್ರ.ದ. ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ, ನ್ಯಾಯವಾದಿ ಬೆಟ್ಟ ಈಶ್ವರ ಭಟ್ ಹಾಗೂ ಕ.ಸಾ.ಪ. ತಾಲೂಕು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ.



































 
 

ಸಮಿತಿ ಸದಸ್ಯರು ಈ ವರ್ಷದ ಪ್ರಶಸ್ತಿ ನಿಯಮಕ್ಕೆ ಅನುಗುಣವಾಗಿ ಕ್ಷೇತ್ರದಿಂದ ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡಿ, ಅವರ ಪೂರ್ಣ ಮಾಹಿತಿಯೊಂದಿಗೆ ಸೂಕ್ತ ಶಿಫಾರಸ್ಸು ಮಾಡಿ ಸೆ. 26ರ ಒಳಗೆ ಸಮಿತಿಗೆ ನೀಡುವಂತೆ ಸದಸ್ಯ ಕಾರ್ಯದರ್ಶಿ ಗಿರೀಶ್ ನಂದನ್ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top