ಸಬ್ ರಿಜಿಸ್ಟ್ರಾರ್ ಕಚೇರಿ ಸಮಯದಲ್ಲಿ ಬದಲಾವಣೆ!! | ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರದಲ್ಲೂ ಪರಿಷ್ಕರಣೆ!! | ತಕ್ಷಣದಿಂದಲೇ ಜಾರಿಯಾಗುವ ಬದಲಾದ ಹೊಸ ಸಮಯ ಹೀಗಿದೆ

ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಯ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಹೆಚ್ಚುವರಿ ಸಮಯ ಕೆಲಸ ಮಾಡುವಂತೆ ಹೊಸ ಆದೇಶವನ್ನು ಹೊರಡಿಸಲಾಗಿದೆ.

ಅಕ್ಟೋಬರ್ 1ರಿಂದ ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ಕಾರ್ಯ ನಿರ್ವಹಿಸಲಿವೆ. ಆದರೆ ಈ ಆದೇಶ ನಾಳೆಯಿಂದಲೇ ಅಂದರೆ ಸೆಪ್ಟೆಂಬರ್ 23ರಿಂದಲೇ ಜಾರಿಗೆ ಬರಲಿದ್ದು, ನಾಲ್ಕನೇ ಶನಿವಾರವಾದ ನಾಳೆಯೂ ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯನಿರ್ವಹಿಸಲಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ.



































 
 

ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಸೆಪ್ಟೆಂಬರ್ 23ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಚೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ. ಸೆಪ್ಟೆಂಬರ್ 23 ನಾಲ್ಕನೇ ಶನಿವಾರದಂದೂ ಕೂಡ ಈ ಅವಧಿಯಲ್ಲಿ ಕಚೇರಿ ಕಾರ್ಯ ನಿರ್ವಹಿಸಲಿದ್ದು, ಈ ಕೆಲಸದ ಅವಧಿಯು ಸೆಪ್ಟೆಂಬರ್ 30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top