ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಶತರುದ್ರ ಯಾಗದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಕುಟುಂಬ ಸಮೇತರಾಗಿ ಪಾಲ್ಗೊಂಡರು.
ಭಾನುವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಕೋಟಿ ಜಪ ಕಾರ್ಯಕ್ರಮದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ಅವರು ಶತರುದ್ರಯಾಗ ನೆರವೇರಿಸಿದರು.
ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಉಪಸ್ಥಿತರಿದ್ದರು.