ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಮಾರ್ಗದರ್ಶನದಲ್ಲಿ ಪ್ರಗತಿ ಬಂಧು-ಸ್ವ ಸಹಾಯ ಸಂಘಗಳ ಒಕ್ಕೂಟ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ವಲಯ ವತಿಯಿಂದ ನರೇಂದ್ರ ವಿವೇಕಾನಂದ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.

ಜನಜಾಗೃತಿ ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ ಕಾರ್ಯಕ್ರಮ ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ಯಾನ್ ಬೋಗ್ ಅಧ್ಯಕ್ಷತೆ ವಹಿಸಿದ್ದರು.
ಜನಜಾಗೃತಿ ತಾಲ್ಲೂಕು ಅಧ್ಯಕ್ಷರು ಲೋಕೇಶ್ ಹೆಗ್ಡೆ, ಜನಜಗೃತಿ ವಲಯ ಅಧ್ಯಕ್ಷ ಸತೀಶ್ ನಾಯ್ಕ್, ವಲಯ ಮೇಲ್ವಿಚಾರಕರು, ಉಪನ್ಯಾಸಕರು, ಸೇವಾಪ್ರತಿನಿಧಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಲಿಟ್ಲ್ ಫ್ಲವರ್ ಶಾಲಾ ಶಿಕ್ಷಕ ಬಾಲಕೃಷ್ಣ ಪೋರ್ದಲ್ ಮಾಹಿತಿ ನೀಡಿದರು. ದಕ್ಷಿಣ ಕನ್ನಡ-2 ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top