ಪುತ್ತೂರು: ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ನಗರದ ಗಾಂಧಿ ಕಟ್ಟೆಯಿಂದ ನಡೆದ ಕಾಲ್ನಡಿಗೆ ಜಾಥಾದಲ್ಲಿ ನಗರದ ಸುಮಾರು 60 ಸ್ವಚ್ಛತಾ ಸೈನಿಕರನ್ನು ಗೌರವಿಸಲಾಯಿತು.
ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಶಾಲು ಹಾಗೂ ಕನ್ನಡ ಪುಸ್ತಕವನ್ನು ನೀಡಿ ಪುಷ್ಪ ಸಿಂಚನ ಮಾಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್, ಕಸಾಪ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ನಗರಸಭೆ ಸಿಬ್ಬಂದಿಗಳು, ಪೌರ ಕಾರ್ಮಿಕರು ಉಪಸ್ಥಿತರಿದ್ದರು.